ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷಾ ದಿನಾಂಕವನ್ನು (KSET-2020) ಮತ್ತೊಮ್ಮೆ ಮುಂದೂಡಿದೆ.

ಮೈಸೂರು ವಿಶ್ವವಿದ್ಯಾಲಯವು ಜೂನ್ 21 (ಭಾನುವಾರ)ರಂದು ಕೆಸೆಟ್ ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು. ಆದರೆ ಲಾಕ್‌ಡೌನ್ ವಿಸ್ತರಣೆ ಮಾಡಿರುವ ಕಾರಣ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಕೆಸೆಟ್ ಪರೀಕ್ಷೆಯ ಮುಂದಿನ ದಿನಾಂಕವನ್ನು ಅತೀ ಶೀಘ್ರದಲ್ಲಿ ಕೆಸೆಟ್ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ಕೆಸೆಟ್ ಪರೀಕ್ಷೆಯನ್ನು ಜುಲೈ ನಲ್ಲಿ ನಡೆಸುವ ಸಾಧ್ಯತೆ ಇದ್ದು, ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳತಕ್ಕದ್ದು.
For Quick Alerts
For Daily Alerts


Click it and Unblock the Notifications











