ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್) ಆಗಸ್ಟ್ 30 ಅಥವಾ ಸೆಪ್ಟೆಂಬರ್ 9 ರಂದು ನಡೆಸಲು ಅನುಮತಿ ಕೋರಿ ಮೈಸೂರು ವಿಶ್ವವಿದ್ಯಾಲಯವು ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದೆ.
ಕೆಸೆಟ್ ಪರೀಕ್ಷೆಯ ಎಲ್ಲ ಪ್ರಕ್ರಿಯೆಗಳನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಬೇಕು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗವು ಸೂಚಿಸಿರುವ ಹಿನ್ನೆಲೆಯಲ್ಲಿ ಆಗಸ್ಟ್ 30 ಅಥವಾ ಸೆಪ್ಟೆಂಬರ್ 9 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ಹೇಳಿದ್ದಾರೆ.
ಮೊದಲು ಆ.6 ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮಾನವ ಸಂಪನ್ಮೂಲ ಸಚಿವಾಲಯವು ಜುಲೈನಲ್ಲಿ ಯಾವುದೇ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಬಾರದು ಎಂದು ಸೂಚಿಸಿದೆ. ಹಾಗಾಗಿ ಇಲಾಖೆಯು ತಿಳಿಸಿರುವ ದಿನಾಂಕಗಳಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾಗದಿದ್ದರೆ, ವಿದ್ಯಾರ್ಥಿಗಳು ಒಂದು ವರ್ಷದ ಕೆ-ಸೆಟ್ ಪರೀಕ್ಷೆ ಬರೆಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಅವರು ಹೇಳಿದ್ದಾರೆ.
For Daily Alerts