ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ಸೆಪ್ಟೆಂಬರ್ 27,2020ರಂದು ನಡೆಯಲಿದೆ. ಈ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷೆಯ ರೋಲ್ ನಂಬರ್ ಜೊತೆಗೆ ಪರೀಕ್ಷಾ ಕೇಂದ್ರದ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೆಸೆಟ್ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಪರೀಕ್ಷಾ ಕೇಂದ್ರವನ್ನು ಚೆಕ್ ಮಾಡಿಕೊಳ್ಳಬಹುದು.

ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಿದ್ದು, ಪ್ರಸ್ತುತ ಪರೀಕ್ಷೆ ಕೇಂದ್ರ, ಸೆಂಟರ್ ಕೋಡ್ ಮತ್ತು ಜಿಲ್ಲಾ ಪರೀಕ್ಷೆ ಕೇಂದ್ರಗಳಲ್ಲಿ ಯಾವ್ಯಾವ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂಬ ಮಾಹಿತಿಯನ್ನು ಮೈಸೂರು ವಿವಿ ಪ್ರಕಟಿಸಿದೆ. ಅಭ್ಯರ್ಥಿಗಳಿಗೆ ನಿಗದಿಪಡಿಸಲಾದ ಪರೀಕ್ಷಾ ಕೇಂದ್ರವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಕೆಸೆಟ್ ಪರೀಕ್ಷಾ ಕೇಂದ್ರ ಚೆಕ್ ಮಾಡಿಕೊಳ್ಳುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲ ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ http://kset.uni-mysore.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್ ನಲ್ಲಿ ಲಭ್ಯವಿರುವ "Allotment of Examination Venue" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನೀವು ಆಯ್ಕೆ ಮಾಡಿದ ಸ್ಥಳದ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4 : ಈಗ ಅಭ್ಯರ್ಥಿಗಳು ವಿಷಯವಾರು ರೋಲ್ ನಂಬರ್ ಜೊತೆಗೆ ಪರೀಕ್ಷಾ ಕೇಂದ್ರವನ್ನು ಚೆಕ್ ಮಾಡಿಕೊಳ್ಳಿ.


Click it and Unblock the Notifications











