KSFES Fire station Officer Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಔಟ್

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಒಟ್ಟು 1567 ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 27,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಆಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಪಿಎಸ್‌ಟಿ ಮತ್ತು ಪಿಇಟಿ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಲಿಖಿತ ಪರೀಕ್ಷೆಯನ್ನು ಆಗಸ್ಟ್ 29,2021ರಂದು ನಿಗದಿಪಡಿಸಲಾಗಿದೆ. ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಹೇಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ತಿಳಿಯಲು ಮುಂದೆ ಓದಿ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಅನುಸರಿಸಿ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://fso.ksfesonline.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ My Application ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ನಂತರ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KSFES released written exam 2021 admit card for fire station officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X