ಕರ್ನಾಟಕ ರಾಜ್ಯದ ಕಾನೂನು ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪ್ರಥಮ ವರ್ಷದಿಂದ ನಾಲ್ಕನೇ ವರ್ಷದ ಪದವಿವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಅಂತಿಮ ವರ್ಷದ ಕಾನೂನು ಪದವಿ ಪರೀಕ್ಷೆಯನ್ನು ಅಕ್ಟೋಬರ್ ನಲ್ಲಿ ಆನ್‌ಲೈನ್ ಮೂಲಕ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಧುಸ್ವಾಮಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿ ಮೇರೆಗೆ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಲಾಗಿರುವ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಾತ್ರ ಮುಂದಿನ ಸೆಮಿಸ್ಟರ್ ಗೆ ತೆರಳಲು ಅವಕಾಶವಿರುತ್ತದೆ ಎಂದಿದ್ದಾರೆ.
ಸೆಪ್ಟೆಂಬರ್ ತಿಂಗಳಿನಿಂದ ತರಗತಿಗಳು ಆರಂಭವಾಗಲಿದ್ದು, ಆನ್‌ಲೈನ್ ತರಗತಿಗಳೂ ಕೂಡ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.
For Daily Alerts