ಕರ್ನಾಟಕ ಕಾರಾಗೃಹ ಇಲಾಖೆಯು ಜೈಲರ್ ಹುದ್ದೆಗಳ ವೈದ್ಯಕೀಯ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
ಇಲಾಖೆಯು ಒಟ್ಟು 662 ಜೈಲರ್ ಮತ್ತು ವಾರ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 9,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ,ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು, ಅದರಂತೆಯೇ ಈಗ ಜೈಲರ್ ಹುದ್ದೆಗಳಿಗೆ ವೈದ್ಯಕೀಯ ಪರೀಕ್ಷೆಯಯನ್ನು ನಡೆಸುತ್ತಿದ್ದು, ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ.
ಪ್ರವೇಶ ಪತ್ರ ಡೌನ್‌ಲೊಡ್ ಮಾಡೋದು ಹೇಗೆ ? :
ಸ್ಟೆಪ್ 1: ಕರ್ನಾಟಕ ಕಾರಾಗೃಹಗಳ ಇಲಾಖೆಯ ಅಧಿಕೃತ ವೆಬ್‌ಸೈಟ್ https://www.karnatakaprisons.in/indexkannada.html ಗೆ ಭೇಟಿ ನೀಡಿದೆ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ "ನೇಮಕಾತಿ-2019"ರ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "MyApplication" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಸಬ್‌ಮಿಟ್ ಮಾಡಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದುಕೊಟ್ಟಿಕೊಳ್ಳಿ