ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2019ರ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) (ಸಿಎಆರ್/ಡಿಎಆರ್) ಹುದ್ದೆಗಳ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಇಟಿ-ಪಿಎಸ್‌ಟಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://ksp.gov.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ " ಪ್ರಸ್ತುತ ನೇಮಕಾತಿ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Police Recruitment 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು "Application for the post of armed police constable (men) (CAR/DAR) -2019ರ ಮುಂದಿರುವ "Click Here To Know Status"ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ / ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ನಂತರ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











