ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಇಲಾಖೆಯು ಜನವರಿ 5,2020 ರಂದು 240 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ, ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.
ಇಲಾಖೆಯು ಜನವರಿ 18,2020 ರಂದು ತಾತ್ಕಾಲಿಕ ಕೀ-ಉತ್ತರಗಳನ್ನು ಬಿಡುಗಡೆ ಮಾಡಿತ್ತು,ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.
ಅಭ್ಯರ್ಥಿಗಳು ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ವೀಕ್ಷಿಸಲು ಮುಂದೆ ನೋಡಿ.


Click it and Unblock the Notifications











