ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಇಲಾಖೆಯು ನವೆಂಬರ್ 17,2019 ರಂದು 2013 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ, ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಾವು ಪರೀಕ್ಷೆ ಬರೆದ ಪ್ರಶ್ನೆ ಪತ್ರಿಕೆ ಸೀರೀಸ್ ಪ್ರಕಾರ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.
ಅಭ್ಯರ್ಥಿಯು ತಾತ್ಕಾಲಿಕ ಕೀ ಉತ್ತರಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ 'ಹೆಚ್ವುವರಿ ನಿರ್ದೇಶಕರು, ಜನರಲ್ ಪೊಲೀಸ್, ನೇಮಕಾತಿ ವಿಭಾಗ, ಕಾರ್ಲ್‌ಟನ್ ಹೌಸ್, ಪ್ಯಾಲೇಸ್ ರಸ್ತೆ, ಬೆಂಗಳೂರು-560001' ವಿಳಾಸಕ್ಕೆ, ಡಿಸೆಂಬರ್ 04,2019ರೊಳಗೆ ಆಧಾರ ಸಹಿತ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











