KSP PSI Provisional Answer Key : ಪಿಎಸ್ಐ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅ.13 ಕೊನೆಯ ದಿನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ರಿಲೀಸ್

ಇಲಾಖೆಯು ಒಟ್ಟು 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 22,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅರ್ಜಿ ಶುಲ್ಕವನ್ನು ಪಾವತಿಸಲು ಫೆಬ್ರವರಿ 24,2021ರ ವರೆಗೆ ಅವಕಾಶ ನೀಡಲಾಗಿತ್ತು.

ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ಅಕ್ಟೋಬರ್ 3,2021ರಂದು ನಡೆಸಲಾಗಿದ್ದು, ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇದೀಗ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪಿಎಸ್‌ಐ ಹುದ್ದೆಗಳ ಲಿಖಿತ ಪರೀಕ್ಷೆಯ ಎಲ್ಲಾ ಸರಣಿಗಳ ತಾತ್ಕಾಲಿಕ ಕೀ ಉತ್ತರಗಳನ್ನು ನೀಡಲಾಗಿದೆ. ಅಭ್ಯರ್ಥಿಗಳು ಕೀ ಉತ್ತರಗಳನ್ನು ವೀಕ್ಷಿಸಿದ ಬಳಿಕ ಆಕ್ಷೇಪಣೆಗಳಿದ್ದಲ್ಲಿ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ನಮೂನೆಯಲ್ಲಿ ಅಕ್ಟೋಬರ್ ೧೩ರೊಳಗೆ ಸಲ್ಲಿಸಬಹುದು.

ಕೆಎಸ್‌ಪಿ ಪಿಎಸ್‌ಐ ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜನವರಿ 22,2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನ : ಫೆಬ್ರವರಿ 22,2021
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ : ಫೆಬ್ರವರಿ 24,2021
ಲಿಖಿತ ಪರೀಕ್ಷೆ ದಿನಾಂಕ : ಅಕ್ಟೋಬರ್ 3,2021
ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 13,2021

ಪೊಲೀಸ್ ಸಬ್-ಇನ್ಸ್ಪೆಕ್ಟರ್ ಹುದ್ದೆಗಳ ತಾತ್ಕಾಲಿಕ ಕೀ-ಉತ್ತರ ರಿಲೀಸ್

ಕೆಎಸ್‌ಪಿ ಪಿಎಸ್‌ಐ ತಾತ್ಕಾಲಿಕ ಕೀ ಉತ್ತರ ಪರಿಶೀಲನೆ ಹೇಗೆ :

* ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://psicivilnhk20.ksp-online.in/ ಗೆ ಭೇಟಿ ನೀಡಿ.
* ಹೋಂ ಪೇಜ್ ನಲ್ಲಿ ಲಭ್ಯವಿರುವ "ನ್ಯೂಸ್ ಮತ್ತು ಈವೆಂಟ್ಸ್‌" ಮೇಲೆ ಕ್ಲಿಕ್ ಮಾಡಿ
* ನಂತರ ಡ್ರಾಪ್ ಡೌನ್ ಮೆನುವಿನಲ್ಲಿ ಆಕ್ಷೇಪಣೆ ಸಲ್ಲಿಕೆಯ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ
* ಅಲ್ಲಿ ಲಭ್ಯವಿರುವ ಸರಣಿ - ಎ, ಬಿ, ಸಿ, ಡಿ ಮತ್ತು ಇ ಗಳಲ್ಲಿ ನಿಮ್ಮ ಆದ್ಯತೆಯನ್ನು ಕ್ಲಿಕ್ ಮಾಡಿ
* ಕೆಸ್‌ಪಿ ಪಿಎಸ್‌ಐ ಕೀ ಉತ್ತರ ವೀಕ್ಷಿಸಿ ಮತ್ತು ನಿಮ್ಮ ಆಕ್ಷೇಪಣೆಯನ್ನು ಅ.13ರೊಳಗೆ ಸಲ್ಲಿಸಿ.

For Quick Alerts
ALLOW NOTIFICATIONS  
For Daily Alerts

English summary
KSP 2021 released provisional answer key for police sub-inspector (civil) posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X