KSP Admit Card 2019: ವಿಶೇಷ ಮೀಸಲು ಸಬ್- ಇನ್ಸ್‌ಪೆಕ್ಟರ್ ಹುದ್ದೆಗಳ ಇಟಿ-ಪಿಎಸ್‌ಟಿ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿಶೇಷ ಮೀಸಲು ಸಬ್- ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಹಿಷ್ಣುತೆ ಪರೀಕ್ಷೆ ಹಾಗೂ ದೇಹಧಾರ್ಢ್ಯತೆ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಇಟಿ-ಪಿಎಸ್‌ಟಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಇಲಾಖೆಯು ಒಟ್ಟು 40 ವಿಶೇಷ ಮೀಸಲು ಸಬ್- ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ) ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 28,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ದೈಹಿಕ ಪರೀಕ್ಷೆ,ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿರುತ್ತದೆ. ಈ ಪರೀಕ್ಷೆಗೆ ಅರ್ಹತೆಯನ್ನು ಪಡೆದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.

ಅಭ್ಯರ್ಥಿಗಳು ರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://ksp.gov.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Police recruitment 2019 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ"Application for the post of special reserve sub-inspector (KSRP) -2019" ಮುಂದಿರುವ Click here to know status ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ My application ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್
ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP 2019 released ETPST admit card for special reserve sub inspector posts in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+