ಕೆಎಸ್‌ಪಿ ಇಲಾಖೆಯ ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ 42 ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ . ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 42 ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿ 15 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

  ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಿದ್ದು, ಇದೀಗ ಪ್ರವೇಶ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಗೃಹರಕ್ಷಕ ಹಾಗೂ ಪೌರರಕ್ಷಣಾ ಇಲಾಖೆಯ ಬೋಧಕ ಹಾಗೂ ಸಹಾಯಕ ಬೋಧಕ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ https://www.karnataka.gov.in/hgcd/english/Pages/home.aspx ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Recruitment 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ "Applications For Instructor & Asst Instructor Posts" ನ ಮುಂದೆ ಕಾಣಿಸುವ Click here to know status ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಪುಟದ ಮೇಲ್ಭಾಗದಲ್ಲಿ ಇರುವ MY APPLICATION ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ Application No / ಅರ್ಜಿ ಸಂಖ್ಯೆ ಮತ್ತು Date of Birth / ಹುಟ್ಟಿದ ದಿನಾಂಕ ನೀಡಿ ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣುತ್ತದೆ
ಸ್ಟೆಪ್ 6: ಅಭ್ಯರ್ಥಿಗಳು ಸ್ಕ್ರೀನ್ ಮೇಲೆ ಕಾಣುವ ಪ್ರವೇಶ ಪತ್ರವನ್ನು ಡೌನಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP has released the admit cards for instructor and asst instructor posts Examination on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+