ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ನಡೆಸುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಲಾಖೆಯು ಒಟ್ಟು 200 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 5,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ದೈಹಿಕ ಪರೀಕ್ಷೆ,ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿರುತ್ತದೆ. ಲಿಖಿತ ಪರೀಕ್ಷೆಯು ಇದೇ ಜನವರಿ 5,2020ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ https://ksp.gov.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Police recruitment 2019 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ"Application for the post of police sub-inspector (civil) (men & women) -2019" ಮುಂದಿರುವ Click here to know status ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ My application ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಲ್ಲಿ ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











