KSP Admit Card 2021 : ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ನಡೆಸುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಕಾನ್‌ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಇಲಾಖೆಯು ಒಟ್ಟು 3533 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 12,2021ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ,ದೈಹಿಕ ಪರೀಕ್ಷೆ,ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಕಾನ್‌ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಅಕ್ಟೋಬರ್ 24,2021ರಂದು ನಿಗದಿಪಡಿಸಲಾಗಿದೆ. ಇದೀಗ ಪ್ರವೇಶ ಪತ್ರವನ್ನು ಪ್ರಕಟ ಮಾಡಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಲಿಖಿತ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://recruitment.ksp.gov.in/index ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಪ್ರವೇಶ ಪತ್ರದ ಆಯ್ಕೆ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ CPC -3533 ಹುದ್ದೆಗಳ ಮುಂದಿರುವ ಡೌನ್‌ಲೋಡ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 6: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karntaka state police 2021 released written exam admit card for 3533 civil police constable posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+