
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಕಾನ್‌ಸ್ಟೇಬಲ್ (ಕೆಎಸ್ಆರ್ಪಿ ಮತ್ತು ಐಆರ್‌ಬಿ) ಹುದ್ದೆಗಳ ದಾಖಲೆ ಪರಿಶೀಲನೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ.
ಪೊಲೀಸ್ ಇಲಾಖೆಯು 2,672 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಜುಲೈ 6,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಇದೀಗ ದಾಖಲೆ ಪರಿಶೀಲನೆ ಪ್ರಕ್ರಿಯೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಹೇಗೆ ಡೌನ್‌ಲೋಡ್ ಮಾಡುವುದು ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ದಾಖಲೆ ಪರಿಶೀಲನೆಯ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://srpc20.ksp-online.in/index.aspx ಗೆ ಭೇಟಿ ನೀಡಿ
ಸ್ಟೆಪ್ 2: ನಂತರ "SRPC Reserve Police Constable recruitment 2021" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "My Application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











