ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 662ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಪರೀಕ್ಷಾ ದಿನಾಂಕವನ್ನು ಘೋಷಿಸಲಾಗಿದೆ. ಈ ಹುದ್ದೆಗಳಿಗೆ ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಮಾರ್ಚ್ 9,2019ರೊಳಗೆ ಆಹ್ವಾನಿಸಲಾಗಿತ್ತು.
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ,ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮೂಲಕ ನೇಮಕಾತಿ ಮಾಡಲಿದ್ದು ಇದೀಗ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ.
ಈ ಮುಂಚೆ ಮೇ 19,2019 ರಂದು ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಲಾಗಿತ್ತು ಆದರೆ ತದನಂತರ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಲಾಗಿದ್ದು, ಸದರಿ ಹುದ್ದೆಗಳ ನೇಮಕಾತಿಯ ಪರೀಕ್ಷೆಗಳು ಜೂನ್ 23,2019 ರಂದು ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸುತ್ತಿರತಕ್ಕದ್ದು.

ಅಭ್ಯರ್ಥಿಗಳು ಕರ್ನಾಟಕ ಕಾರಾಗೃಹ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











