ಕರ್ನಾಟಕ ಕಾರಾಗೃಹ ಇಲಾಖೆ ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರವೇಶ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ 662ಜೈಲರ್ ಮತ್ತು ವಾರ್ಡರ್ ಹುದ್ದೆಗಳ ನೇರ ನೇಮಕಾತಿಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು ಮತ್ತು ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಮಾರ್ಚ್ 9,2019ರೊಳಗೆ ಸಲ್ಲಿಸಲು ತಿಳಿಸಲಾಗಿತ್ತು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ,ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮೂಲಕ ನೇಮಕಾತಿ ಮಾಡಲಾಗುವುದು. ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ನಿಯಮಾನುಸಾರ ದಿನಾಂಕ ಮೇ 19,2019 ರಂದು ನಿಗದಿಪಡಿಸಿರುವ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಲಿಖಿತ ಪರೀಕ್ಷೆಯ ದಿನಾಂಕವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅತೀ ಶೀಘ್ರದಲ್ಲಿ ತಿಳಿಸಲಾಗುವುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಈ ಬಗೆಗೆ ಪ್ರಕಟಣೆ ಓದಲು ಮುಂದೆ ಕ್ಲಿಕ್ ಮಾಡಿ


Click it and Unblock the Notifications











