KSP Recruitment 2019 : ಪಿಎಸ್‌ಐ ಮತ್ತು ಆರ್‌ಎಸ್‌ಐ ಹುದ್ದೆಗಳ ದೈಹಿಕ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪಿಎಸ್‌ಐ (ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್)) ಮತ್ತು ಆರ್‌ಎಸ್‌ಐ (ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್‌ / ಡಿಎಆರ್‌)) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ : ದೈಹಿಕ ಪರೀಕ್ಷಾ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಇಲಾಖೆಯು ಒಟ್ಟು 200 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಮತ್ತು 40 ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್‌ / ಡಿಎಆರ್‌) ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 5,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆ (ದೈಹಿಕ ಪರೀಕ್ಷೆ), ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು,ಇದೀಗ ಸಹಿಷ್ಣುತೆ ಮತ್ತು ದೇಹದಾಢ್ಯತೆ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1 : ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://ksp.gov.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್‌ನಲ್ಲಿ ಪ್ರಸ್ತುತ ನೇಮಕಾತಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3 : ನಂತರ "Police recruitment 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4 : ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Application for the post of police sub-inspector (civil) (men & women)-2019" ಅಥವಾ "Application for the post of armed reserve sub-inspector of police (CAR /DAR) (men)-2019" ಮುಂದಿರುವ Click here to know status ಮೇಲೆ ಕ್ಲಿಕ್ ಮಾಡಿ (ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸಿರುತ್ತೀರೋ ಆ ಹುದ್ದೆಗಳ ಮುಂದೆ ಕ್ಲಿಕ್ ಮಾಡಿ)
ಸ್ಟೆಪ್ 5 : ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6 : ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7 : ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್
ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್‌ / ಡಿಎಆರ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KSP Recruitment 2019 Released ETPST admit card for police sub inspector (civil) and armed reserve sub-inspector of police posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+