ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಯ ಪರೀಕ್ಷಾ ದಿನಾಂಕವನ್ನು ಘೋಷಿಸಿದೆ ಹಾಗೂ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಇಲಾಖೆಯು ಒಟ್ಟು 163 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 29,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು,ಇದೀಗ ಪರೀಕ್ಷಾ ದಿನಾಂಕವನ್ನು ಘೋಷಿಸಿದೆ.

ಈ ಹುದ್ದೆಗಳಿಗೆ ಸೆಪ್ಟೆಂಬರ್ 22,2019ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :
ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ https://www.ksp.gov.in/kindex.aspx ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ನಲ್ಲಿ "ಪ್ರಸ್ತುತ ನೇಮಕಾತಿ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Police recruitment 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Application for the post of civil police constable (Men & women)" ಮುಂದಿರುವ Click here to know status ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 6: ಅಭ್ಯರ್ಥಿಗಳು ನಿಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 7: ಸ್ಕ್ರೀನ್ ಮೇಲೆ ನಿಮ್ಮ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಡೌನ್ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅಭ್ಯರ್ಥಿಗಳು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











