
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ (ಕೆ.ಎಸ್.ಆರ್.ಪಿ) (ಪುರುಷ ಮತ್ತು ಮಹಿಳಾ) ಮತ್ತು ಪೊಲೀಸ್ ಕಾನ್‌ಸ್ಟೇಬಲ್ (ಐ.ಆರ್.ಬಿ) (ಪುರುಷ) ಹಾಗೂ ವಿಶೇಷ ರಿಸರ್ವ್ ಪೊಲೀಸ್ ಕಾನ್‌ಸ್ಟೇಬಲ್ (ಬ್ಯಾಂಡ್ಸ್‌ಮೆನ್) (ಪುರುಷ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇಲಾಖೆಯು ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಸದರಿ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ http://rec20.ksp-online.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಅಭ್ಯರ್ಥಿಗಳು "Application for the post of special reserve police constable (KSRP) (Men), PC-IRB (Men) Special reserve police constable (KSRP) (Bandsmen) (Men) -2020"ರ ಮುಂದಿರುವ "Click Here To Know Status" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ / ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ನಂತರ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











