ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರವನ್ನು ಚೆಕ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 3533 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 12,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು. ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಅಕ್ಟೋಬರ್ 24,2021ರಂದು ನಡೆಸಲಾಗಿದೆ. ಈ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ನವೆಂಬರ್ 15,2021ರೊಳಗೆ ಆಹ್ವಾನಿಸಲಾಗಿತ್ತು.
ಬಂದಂತಹ ಆಕ್ಷೇಪಣೆಗಳನ್ನು ಪರಿಶೀಲಿಸಿ ಇದೀಗ ಅಂತಿಮ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಕೀ ಉತ್ತರಗಳಿಗೆ ಸಂಬಂಧಿಸಿದ ಲಿಂಕ್ ಕ್ಲಿಕ್ ಮಾಡಿ ನಂತರ ಪಿಡಿಎಫ್ ಅನ್ನು ವೀಕ್ಷಿಸಬಹುದು.
ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳಿಗೆ ಪಿಯುಸಿ/10+2/ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://rec21.ksp-online.in/ ಗೆ ಭೇಟಿ ನೀಡಿ.


Click it and Unblock the Notifications











