KSISF KSRP Sub Inspector ET PST Admit Card: ಇಟಿ- ಪಿಎಸ್‌ಟಿ ಪ್ರವೇಶ ಪತ್ರ ಬಿಡುಗಡೆ

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್‌ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್ -ಇನ್ಸ್ ಪೆಕ್ಟರ್ (ಕೆಎಸ್ಆರ್ ಪಿ) (ಪುರುಷ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಿಗೆ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳ ಇಟಿ- ಪಿಎಸ್‌ಟಿ ಪ್ರವೇಶ ಪತ್ರ ರಿಲೀಸ್

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕೆಎಸ್‌ಐಎಸ್‌ಎಫ್‌ನ 51 ಸಬ್‌ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಮತ್ತು ಕೆಎಸ್‌ಆರ್‌ಪಿಯ 40 ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಅಧಿಸೂಚನೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಗೆ ಜುಲೈ 27, 2020ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು, ಇದೀಗ ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ http://rec20.ksp-online.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "ಪ್ರಸ್ತುತ ನೇಮಕಾತಿ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "Application for the post of KSISF And KSRP Sub Inspector -2020"ರ ಮುಂದಿರುವ "Click Here To Know Status" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "My application" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಅಪ್ಲಿಕೇಶನ್ ನಂಬರ್ / ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 6: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ನಂತರ ಅದನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka State Police (KSP) has released the admit card of Endurance Test (ET) and Physical Standard Test (PST) for Sub-Inspector Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+