ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತಾಂತ್ರಿಕ ಸಹಾಯಕ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳ ನೇಮಕಾತಿಗೆ ನಡೆಸಲಾಗುವ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ತಾಂತ್ರಿಕ ಸಹಾಯಕ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಫೆಬ್ರವರಿ 2,2020ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆಯು ಬೆಳಗ್ಗೆ 10:30 ರಿಂದ 12:30ರ ವರೆಗೆ ಮತ್ತು ಮಧ್ಯಾಹ್ನ 2:30 ರಿಂದ 4:30ರ ವರೆಗೆ ಒಂಟು 100 ಅಂಕಗಳಿಗೆ ನಡೆಸಲಾಗುವುದು.
ಕೆಎಸ್ಆರ್ ಟಿಸಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "ಕೆಎಸ್ಆರ್ ಟಿಸಿ ಪ್ರವೇಶ ಪತ್ರ 2020" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ