ಈ ವರ್ಷ ಕೊರೋನಾ ಸೋಂಕು ದೇಶದೆಲ್ಲೆಡೆ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಅನೇಕ ಪರೀಕ್ಷೆಗಳು ನಿಗದಿತ ದಿನಾಂಕದಲ್ಲಿ ನಡೆದಿರುವುದಿಲ್ಲ.

ಕೊರೋನಾ ಸೋಂಕು ಹೆಚ್ಚುತ್ತಿರುವ ನಡುವೆಯೂ ಎಸ್‌ಎಸ್‌ಎಲ್‌ಸಿ,ಪಿಯುಸಿ, ಸಿಇಟಿ ಹಾಗೂ ಇನ್ನು ಕೆಲವು ಪರೀಕ್ಷೆಗಳು ನಡೆದಿವೆ. ಮುಂಬರುವ ದಿನಗಳಲ್ಲಿ ಕೆಲವು ಪರೀಕ್ಷಾ ದಿನಾಂಕಗಳು ನಿಗದಿಯಾಗಿವೆ.
ಮುಂಬರುವ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂಬ ಉದ್ದೇಶದಿಂದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಹಳೆಯ ಪಾಸ್ ಜೊತೆಗೆ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ತಮ್ಮ ವಾಸಸ್ಥಳಕ್ಕೆ ಉಚಿತ ಪ್ರಯಾಣ ಮಾಡಬಹುದು ಎಂದು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಾರಿಗೆ ನಿಗಮಗಳು ತಿಳಿಸಿವೆ.
For Quick Alerts
For Daily Alerts
English summary
Good news from KSRTC an BMTC to students. Students can travel with old pass for exams.
Story first published: Thursday, September 3, 2020, 15:45 [IST]


Click it and Unblock the Notifications











