ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಅಕ್ಟೋಬರ್ 4,2020ರಂದು ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಹಿಂದೆ ಜು. 12ಕ್ಕೆ ನಿಗದಿಯಾಗಿದ್ದ ಟಿಇಟಿ ಪರೀಕ್ಷೆಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.
KTET ಪರೀಕ್ಷೆ 2020ರ ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ KTET 2020 ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ.
ಸ್ಟೆಪ್ 4: ನಂತರ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
For Daily Alerts