
ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯವು ಎಲ್ಲಾ ಯುಜಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಪ್ರಕಟಣೆ ಹೊರಡಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಏಪ್ರಿಲ್ 21,2021 ರಿಂದ ಮೇ 4,2021ರವರೆಗೆ ಶಾಲಾ/ಕಾಲೇಜುಗಳಿಗೆ ರಜೆ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ನಡೆಯುತ್ತಿದ್ದ ಸ್ನಾತಕ ಪದವಿ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.
ವಿಶ್ವವಿದ್ಯಾಲಯವು ಮುಂದೂಡಲಾಗಿರುವ ಪರೀಕ್ಷೆಗಳ ದಿನಾಂಕವನ್ನು ಸರ್ಕಾರದ ಮುಂದಿನ ಮಾರ್ಗಸೂಚಿಯನ್ನಾಧರಿಸಿ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
Kuvempu university postponed all ug course exams due to covid19.
Story first published: Wednesday, April 21, 2021, 15:43 [IST]


Click it and Unblock the Notifications











