ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ಫೇಸ್ I ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಎಲ್‌ಐಸಿಯು ಒಟ್ಟು 218 ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಗಳು ಆಗಸ್ಟ್ 28,2021ರಂದು ನಡೆಸಲಾಗಿತ್ತು. ಇದೀಗ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಎಲ್‌ಐಸಿ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1: ಎಲ್‌ಐಸಿ ಹೆಚ್‌ಎಫ್‌ಎಲ್‌ನ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Result Of Preliminary Examination Held On For Recruitment Of AE/AAO (Specialist)-2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೆಳಗೆ ನೀಡಲಾಗಿರುವ ಹುದ್ದೆಗಳ ಹೆಸರಿನಲ್ಲಿ ನೀವು ಪರೀಕ್ಷೆ ಬರೆದ ಹುದ್ದೆಯ ಹೆಸರನ್ನು ಆಯ್ಕೆ ಮಾಡಿ
ಸ್ಟೆಪ್ 5: ತದನಂತರ ಅಲ್ಲಿ ನೀಡಲಾಗಿರುವ ಪಿಡಿಎಫ್ ಅನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಪಿಡಿಎಫ್ ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರಿನ ಜೊತೆ ಫಲಿತಾಂಶ ಕೂಡ ಲಭ್ಯವಿರುತ್ತದೆ ಅದನ್ನು ವೀಕ್ಷಿಸಿ
ಸ್ಟೆಪ್ 7: ಫಲಿತಾಂಶ ವೀಕ್ಷಿಸಿದ ಬಳಿಕ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಈ ಲಿಂಕ್ ಬಳಸಿ.


Click it and Unblock the Notifications











