ಭಾರತೀಯ ಜೀವ ವಿಮಾ ನಿಗಮ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಎಎಓ) ಹುದ್ದೆಗಳಿಗೆ ನಡೆಸಲಾಗುವ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಎಲ್‌ಐಸಿ 590 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಜೂನ್ 11 ರಿಂದ ಜೂನ್ 28,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಎಲ್‌ಐಸಿ ಎಎಓ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಎಲ್‌ಐಸಿಯ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕಾಣಿಸುವ "Recruitment of Assistant Administrative Officer 2019" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: "AAO 2019-Main Examination Call Letter- Live Link" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ ರೋಲ್ ನಂ / ರಿಜಿಸ್ಟಾರ್ ನಂ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019 ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ