ಭಾರತೀಯ ಜೀವ ವಿಮಾ ನಿಗಮ ಅಪ್ರೆಂಟಿಸ್ ಡೆವಲಪ್ಮೆಂಟ್ (ಎಡಿಓ) ಹುದ್ದೆಗಳಿಗೆ ನಡೆಸಲಾಗುವ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಎಲ್‌ಐಸಿ 8581 ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 9 ರೊಳಗೆ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್‌ಲೈನ್ ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಿಂದ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಜೂನ್ 29 ರಿಂದ ಜುಲೈ 6,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.
ಎಲ್‌ಐಸಿ ಎಡಿಓ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಎಲ್‌ಐಸಿಯ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕಾಣಿಸುವ "Recruitment of Apprentice Development Officer 2018-19" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: "Online Exam Call Letter-Phase - I- Live Link" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ ರೋಲ್ ನಂ / ರಿಜಿಸ್ಟಾರ್ ನಂ ಮತ್ತು ಪಾಸ್‌ವರ್ಡ್/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ. ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











