ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ಫೇಸ್ I ಪ್ರಿಲಿಮಿರಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಲ್‌ಐಸಿಯು ಒಟ್ಟು 218 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಭಾರತೀಯ ಜೀವ ವಿಮಾ ನಿಗಮ ನೇಮಕಾತಿಯ 218 ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ಪ್ರಿಲಿಮಿನರಿ ಪರೀಕ್ಷೆಗಳು ಆಗಸ್ಟ್ 28,2021ರಂದು ನಡೆಸಲಾಗುತ್ತಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಜಿದಾರರು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಎಲ್‌ಐಸಿ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನ ಡೌನ್‌ಲೋಡ್ ಮಾಡುವುದು ಹೇಗೆ ?
ಸ್ಟೆಪ್ 1: ಎಲ್‌ಐಸಿ ಹೆಚ್‌ಎಫ್‌ಎಲ್‌ನ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Recuritment of Asst Engineers/AA/AAO (Specialist)-2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರೋಲ್ ನಂ / ರಿಜಿಸ್ಟ್ರೇಶನ್ ನಂ ಮತ್ತು ಪಾಸ್‌ವರ್ಡ್/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 6: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿ
ಸ್ಟೆಪ್ 7: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











