LIC AE And AAO Main Exam 2021 : ಎಲ್‌ಐಸಿ ಎಇ ಮತ್ತು ಎಎಒ ಹುದ್ದೆಗಳ ಮುಖ್ಯ ಪರೀಕ್ಷೆ ಅ.31ಕ್ಕೆ ನಿಗದಿ

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹಾಯಕ ಆಡಳಿತಾಧಿಕಾರಿ (ಎಎಒ) ಮತ್ತು ಸಹಾಯಕ ಇಂಜಿನಿಯರ್ (ಎಇ) ಹುದ್ದೆಗಳ ಪ್ರಮುಖ ಪರೀಕ್ಷೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಪರೀಕ್ಷಾ ದಿನಾಂಕವನ್ನು ವೀಕ್ಷಿಸಬಹುದು.

ಎಲ್‌ಐಸಿ ಎಇ ಮತ್ತು ಎಎಓ ಹುದ್ದೆಗಳ ಪ್ರಮುಖ ಪರೀಕ್ಷೆ ದಿನಾಂಕ ಘೋಷಣೆ

ಎಲ್‌ಐಸಿಯು ಒಟ್ಟು 218 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಇದಕ್ಕೆ ಸಂಬಂಧಪಟ್ಟಂತೆ ಪ್ರಿಲಿಮಿನರಿ ಪರೀಕ್ಷೆಗಳು ಆಗಸ್ಟ್ 28,2021ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಸೆಪ್ಟೆಂಬರ್ 28,2021ರಂದು ಪ್ರಕಟ ಮಾಡಲಾಗಿತ್ತು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಅಕ್ಟೋಬರ್ 31,2021ರಂದು ಮುಖ್ಯ ಪರೀಕ್ಷೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ. ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.

ಎಲ್‌ಐಸಿ ಎಇ ಎಎಒ ಮುಖ್ಯ ಪರೀಕ್ಷೆ 2021 ನಂತರ ಏನು ?:

ಎಲ್‌ಐಸಿ ಸಹಾಯಕ ಆಡಳಿತಾಧಿಕಾರಿ (ಎಎಒ) ಮತ್ತು ಸಹಾಯಕ ಇಂಜಿನಿಯರ್ (ಎಇ) ಹುದ್ದೆಗಳ ಮುಖ್ಯ ಪರೀಕ್ಷೆ 2021ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುವುದು. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ:

ಎಲ್‌ಐಸಿ ಸಹಾಯಕ ಆಡಳಿತಾಧಿಕಾರಿ (ಎಎಒ) ಮತ್ತು ಸಹಾಯಕ ಇಂಜಿನಿಯರ್ (ಎಇ) ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಕ್ರಿಯೆಯಲ್ಲಿ ಅಂತಿಮ ಮೆರಿಟ್ ಪಟ್ಟಿಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಪೂರ್ವ-ನೇಮಕಾತಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯವಾಗಿ ಫಿಟ್ ಆಗಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,795/- ರಿಂದ 62,315/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಭಾರತೀಯ ಜೀವ ವಿಮಾ ನಿಗಮ ಅಧಿಕೃತ ವೆಬ್‌ಸೈಟ್ https://www.licindia.in/ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ದಿನಾಂಕ ಪ್ರಕಟಣೆಯನ್ನು ವೀಕ್ಷಿಸಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
LIC released main exam date 2021 for AE and AAO posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+