LIC AAO And AE Mains Result 2022 : ಮುಖ್ಯ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹಾಯಕ ಆಡಳಿತಾಧಿಕಾರಿ (ಎಎಒ) ಮತ್ತು ಸಹಾಯಕ ಇಂಜಿನಿಯರ್ (ಎಇ) ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಎಲ್‌ಐಸಿ ಎಎಓ ಮತ್ತು ಎಇ ಹುದ್ದೆಗಳ ಮುಖ್ಯ ಪರೀಕ್ಷೆಯ ಫಲಿತಾಂಶ ಔಟ್

ಎಲ್‌ಐಸಿಯು ಒಟ್ಟು 218 ಸಹಾಯಕ ಆಡಳಿತಾಧಿಕಾರಿ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಗಳು ಆಗಸ್ಟ್ 28,2021ರಂದು ನಡೆಸಲಾಗಿತ್ತು. ತದನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಅಕ್ಟೋಬರ್ 31,2021ರಂದು ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು, ಇದೀಗ ಫಲಿತಾಂಶವನ್ನು ಪ್ರಕಟ ಮಾಡಲಾಗಿರುತ್ತದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಲ್‌ಐಸಿ ಎಇ ಎಎಒ ಮುಖ್ಯ ಪರೀಕ್ಷೆ 2021 ನಂತರ ಏನು ?:

ಎಲ್‌ಐಸಿ ಸಹಾಯಕ ಆಡಳಿತಾಧಿಕಾರಿ (ಎಎಒ) ಮತ್ತು ಸಹಾಯಕ ಇಂಜಿನಿಯರ್ (ಎಇ) ಹುದ್ದೆಗಳ ಮುಖ್ಯ ಪರೀಕ್ಷೆ 2021ರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನಕ್ಕೆ ಕರೆಯಲಾಗುವುದು. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ:

ಎಲ್‌ಐಸಿ ಸಹಾಯಕ ಆಡಳಿತಾಧಿಕಾರಿ (ಎಎಒ) ಮತ್ತು ಸಹಾಯಕ ಇಂಜಿನಿಯರ್ (ಎಇ) ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರಕ್ರಿಯೆಯಲ್ಲಿ ಅಂತಿಮ ಮೆರಿಟ್ ಪಟ್ಟಿಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಪೂರ್ವ-ನೇಮಕಾತಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವೈದ್ಯಕೀಯವಾಗಿ ಫಿಟ್ ಆಗಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 32,795/- ರಿಂದ 62,315/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಎಲ್‌ಐಸಿ ಮುಖ್ಯ ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ? :

ಸ್ಟೆಪ್ 1: ಎಲ್‌ಐಸಿ ಹೆಚ್‌ಎಫ್‌ಎಲ್‌ನ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ "Carers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Result Of Main Examination For Recruitment Of AE/AAO (Specialist)-2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೆಳಗೆ ನೀಡಲಾಗಿರುವ ಹುದ್ದೆಗಳ ಹೆಸರಿನಲ್ಲಿ ನೀವು ಪರೀಕ್ಷೆ ಬರೆದ ಹುದ್ದೆಯ ಹೆಸರನ್ನು ಆಯ್ಕೆ ಮಾಡಿ
ಸ್ಟೆಪ್ 5: ತದನಂತರ ಅಲ್ಲಿ ನೀಡಲಾಗಿರುವ ಪಿಡಿಎಫ್ ಅನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಪಿಡಿಎಫ್ ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರಿನ ಜೊತೆ ಫಲಿತಾಂಶ ಕೂಡ ಲಭ್ಯವಿರುತ್ತದೆ ಅದನ್ನು ವೀಕ್ಷಿಸಿ
ಸ್ಟೆಪ್ 7: ಫಲಿತಾಂಶ ವೀಕ್ಷಿಸಿದ ಬಳಿಕ ಪ್ರಿಂಟೌಟ್‌ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಈ ಲಿಂಕ್ ಬಳಸಿ.

More News  

For Quick Alerts
ALLOW NOTIFICATIONS  
For Daily Alerts

English summary
LIC released main examination 2022 result for AE and AAO posts. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+