LIC Admit Card 2019: ಅಸಿಸ್ಟೆಂಟ್ ಹುದ್ದೆಗಳ ಪ್ರಮುಖ ಪರೀಕ್ಷೆ ಪ್ರವೇಶ ಪತ್ರ ರಿಲೀಸ್

ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಅಸಿಸ್ಟೆಂಟ್ ಹುದ್ದೆಗಳ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಈಗ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಲ್‌ಐಸಿ ಅಸಿಸ್ಟೆಂಟ್ ಹುದ್ದೆಗಳ ಮುಖ್ಯ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಲ್‌ಐಸಿಯು ಒಟ್ಟು 8000ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 1,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಎಲ್‌ಐಸಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದೆ. ಇದಕ್ಕೆ ಸಂಬಂಧಪಟ್ಟಂತೆ ಅಕ್ಟೋಬರ್ 30 ಮತ್ತು 31ರಂದು ಪ್ರಿಲಿಮಿನರಿ ಪರೀಕ್ಷೆಗಳು ನಡೆದಿದ್ದು, ಈಗಾಗಲೇ ಪರೀಕ್ಷೆಯ ಫಲಿತಾಂಶ ಕೂಡ ಪ್ರಕಟಗೊಂಡಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು, ಇದೀಗ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಎಲ್‌ಐಸಿ ಅಸಿಸ್ಟೆಂಟ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್1: ಅಭ್ಯರ್ಥಿಗಳು ಮೊದಲು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Carers" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Recuritment of Assistants 2019 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "LIVE LINK FOR CALL LETTER DOWNLOADING- MAIN EXAMINATION"ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಗಳು ನಿಮ್ಮ ರೋಲ್ ನಂ / ರಿಜಿಸ್ಟ್ರೇಶನ್‌ ನಂ ಮತ್ತು ಪಾಸ್‌ವರ್ಡ್‌/ ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ

ಸ್ಟೆಪ್ 6: ನಂತರ ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು. ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿ

ಸ್ಟೆಪ್ 7: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಹಾಗೂ ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
LIC 2019 has released mains admit cards for assistant posts on official website. Candidates can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X