ಭಾರತೀಯ ಜೀವ ವಿಮಾ ನಿಗಮವು 2019ರ ನೇಮಕಾತಿಯ ಸಹಾಯಕ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಭಾರತೀಯ ಜೀವ ವಿಮಾ ನಿಗಮವು ಭಾರತದೆಲ್ಲೆಡೆ ಒಟ್ಟು 8,000 ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ ಅಕ್ಟೋಬರ್ 1,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಭಾರತದೆಲ್ಲೆಡೆ ವಿವಿಧ ಕೇಂದ್ರಗಳಲ್ಲಿ ಡಿಸೆಂಬರ್ 22,2019ರಂದು ನಡೆದ ಎಲ್‌ಐಸಿ ಪ್ರಮುಖ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಇದೀಗ ವೀಕ್ಷಿಸಬಹುದು. ಪ್ರಮುಖ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ಎಲ್‌ಐಸಿ ಪ್ರಮುಖ ಪರೀಕ್ಷಾ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ವೆಬ್ ಸೈಟ್ https://www.licindia.in/ ಗೆ ಹೋಗಿ
ಸ್ಟೆಪ್ 2: ಹೋಮ್ ಪೇಜ್ ನಲ್ಲಿ ಲಭ್ಯವಿರುವ "Careers" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Recruitment of assistant 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ಜೋನ್ ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 5: ನಂತರ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪಟ್ಟಿಯನ್ನು ವೀಕ್ಷಿಸಬಹುದು
ಸ್ಟೆಪ್ 6: ಅಭ್ಯರ್ಥಿಯು ಫಲಿತಾಂಶದ ಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











