States That Cancelled And Postponed Board Exams: ಯಾವೆಲ್ಲಾ ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆ ರದ್ದು ?

ಈ ಎಲ್ಲಾ ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆ ರದ್ದು!

ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಪರೀಕ್ಷಾ ಮಂಡಳಿಯು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ ಮತ್ತು ಸಿಬಿಎಸ್ಇ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ.

ದೇಶದೆಲ್ಲೆಡೆ ಹೆಚ್ಚುತ್ತಿರುವ ಕೋವಿಡ್ ಸೋಂಕು ಕಾರಣದಿಂದಾಗಿ ಅನೇಕ ರಾಜ್ಯಗಳು ಕೂಡ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲು ಮತ್ತು ಮುಂದೂಡಲು ನಿರ್ಧರಿಸಿವೆ. ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದ ಮತ್ತು ಮುಂದೂಡಿದ ರಾಜ್ಯಗಳ ಪಟ್ಟಿ ಇಲ್ಲಿದೆ.

ಜಮ್ಮು ಮತ್ತು ಕಾಶ್ಮೀರ:

ಜಮ್ಮು ಮತ್ತು ಕಾಶ್ಮೀರ:

ಜಮ್ಮು ಮತ್ತು ಕಾಶ್ಮೀರ ರಾಜ್ಯ ಪರೀಕ್ಷಾ ಮಂಡಳಿಯು ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಿದೆ. ಪರಿಸ್ಥಿತಿಯನ್ನು ಗಮನಿಸಿಕೊಂಡು ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಿದೆ.

ಪಂಜಾಬ್:

ಪಂಜಾಬ್:

ಪಂಜಾಬ್ ರಾಜ್ಯ ಸರ್ಕಾರವು 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ. 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ. ಪರೀಕ್ಷಾ ಮಂಡಳಿಯು ಪರಿಸ್ಥಿತಿಯನ್ನು ಗಮನಿಸಿಕೊಂಡು ಪರೀಕ್ಷಾ ವೇಳಾಪಟ್ಟಿಯನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ.

ಮೆಘಾಲಯ:

ಮೆಘಾಲಯ:

ಮೆಘಾಲಯ ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯ ಸಲಹೆಯ ಮೇರೆಗೆ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಈಗಾಗಲೇ ನಿಗದಿಪಡಿಸಿರುವ ದಿನಾಂಕಗಳಲ್ಲಿ ನಡೆಸಲಿದೆ.

ಉತ್ತರ ಪ್ರದೇಶ:

ಉತ್ತರ ಪ್ರದೇಶ:

ಉತ್ತರ ಪ್ರದೇಶದಲ್ಲಿ ಮೇ 15ರ ವರೆಗೆ 1 ರಿಂದ 12ನೇ ತರಗತಿ ವರೆಗಿನ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ ಹಾಗಾಗಿ ಈ ಸಂದರ್ಭದಲ್ಲಿ ಯಾವುದೇ ಪರೀಕ್ಷೆಯನ್ನು ನಡೆಸುವಂತಿಲ್ಲ ಮತ್ತು 10 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮೇ 20ರ ನಂತರ ನಡೆಸುವುದಾಗಿ ತಿಳಿಸಿದೆ.

ಹರಿಯಾಣ ಮತ್ತು ಒಡಿಶಾ:

ಹರಿಯಾಣ ಮತ್ತು ಒಡಿಶಾ:

ಹರಿಯಾಣ ರಾಜ್ಯ ಸರ್ಕಾರವು 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿದೆ.

ಒಡಿಶಾ ರಾಜ್ಯ ಸರ್ಕಾರವು ಕೊರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.

ರಾಜಸ್ಥಾನ ಮತ್ತು ದೆಹಲಿ:

ರಾಜಸ್ಥಾನ ಮತ್ತು ದೆಹಲಿ:

ಕೊರೋನಾ ಎರಡನೇ ಅಲೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ರಾಜ್ಯ ಸರ್ಕಾರವು 10 ಮತ್ತು ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.

ದೆಹಲಿ ಸರ್ಕಾರವು 9 ಮತ್ತು 11ನೇ ತರಗತಿ ಆಫ್‌ಲೈನ್ ಪರೀಕ್ಷೆಯನ್ನು ರದ್ದು ಮಾಡಿದೆ.

ಹಿಮಾಚಲ ಪ್ರದೇಶ ಮತ್ತು ಮಹಾರಾಷ್ಟ್ರ:

ಹಿಮಾಚಲ ಪ್ರದೇಶ ಮತ್ತು ಮಹಾರಾಷ್ಟ್ರ:

ಹಿಮಾಚಲ ಪ್ರದೇಶ ರಾಜ್ಯವು 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಿದೆ.

ಮಹಾರಾಷ್ಟ್ರ ಸರ್ಕಾರವು ಸದ್ಯದ ಪರಿಸ್ಥಿತಿಯಲ್ಲಿ 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ.

ಮಧ್ಯ ಪ್ರದೇಶ ಮತ್ತು ಗುಜರಾತ್:

ಮಧ್ಯ ಪ್ರದೇಶ ಮತ್ತು ಗುಜರಾತ್:

ಮಧ್ಯ ಪ್ರದೇಶ ರಾಜ್ಯ ಸರ್ಕಾರವು 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ. ಈ ಪರೀಕ್ಷೆಗಳನ್ನು ಜೂನ್ ಮೊದಲ ವಾರದಲ್ಲಿ ಪ್ರಾರಂಭಿಸುವುದಾಗಿ ತಿಳಿಸಿದೆ.

ಗುಜರಾತ್ ರಾಜ್ಯ ಸರ್ಕಾರವು 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿದೆ.

ಕರ್ನಾಟಕ:

ಕರ್ನಾಟಕ:

ರಾಜ್ಯದಲ್ಲಿ 10ನೇ ತರಗತಿ ಬೋರ್ಡ್ ಪರೀಕ್ಷೆಯು ಜೂನ್ 21 ರಿಂದ ಪ್ರಾರಂಭವಾಗುವುದರಿಂದ ಈಗಾಗಲೇ ನಿಗದಿಯಾಗಿರುವಂತೆ ಪರೀಕ್ಷೆ ನಡೆಯಲಿದೆ ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ.

For Quick Alerts
ALLOW NOTIFICATIONS  
For Daily Alerts

English summary
Here is the list of states which have cancelled and postponed class 10 and 12 board exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X