ಕೊರೋನಾ ಸೋಂಕು ಹೆಚ್ಚಳದಿಂದಾಗಿ ಅನೇಕ ರಾಜ್ಯ ಸರ್ಕಾರಗಳು ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿವೆ. ಇನ್ನೂ ಕೆಲವು ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆ ರದ್ದು ಕುರಿತು ಇನ್ನು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಬೋರ್ಡ್ ಪರೀಕ್ಷೆಗಳನ್ನು ಇನ್ನು ಯಾವೆಲ್ಲಾ ರಾಜ್ಯಗಳಲ್ಲಿ ರದ್ದು ಮಾಡಲಾಗಿಲ್ಲ ಎಂಬ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

ಬೋರ್ಡ್ ಪರೀಕ್ಷೆ 2021 ಕುರಿತು ಇನ್ನೂ ನಿರ್ಧಾರ ತೆಗೆದುಕೊಳ್ಳಬೇಕಾದ ರಾಜ್ಯಗಳ ಪಟ್ಟಿ ಇಲ್ಲಿದೆ:
1. ಆಂಧ್ರಪ್ರದೇಶ:
ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವ ಕುರಿತು ಆಂಧ್ರಪ್ರದೇಶ ಸರ್ಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಿದೆ.
2. ಅಸ್ಸಾಂ:
ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸಮಾಲೋಚನೆ ನಡೆಸಿ 10 ನೇ ತರಗತಿ ಪರೀಕ್ಷೆ ಮತ್ತು ಎಎಚ್‌ಎಸ್‌ಇಸಿ 12 ನೇ ತರಗತಿ ಪರೀಕ್ಷೆಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
3. ಪಶ್ಚಿಮ ಬಂಗಾಳ:
ಪಶ್ಚಿಮ ಬಂಗಾಳ ಸರ್ಕಾರವು 10 ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಎರಡೂ ತರಗತಿಗಳಿಗೆ ಬೋರ್ಡ್ ಪರೀಕ್ಷೆಯ ದಿನಾಂಕಗಳನ್ನು ಘೋಷಿಸುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿತ್ತು ಆದರೆ ಅದನ್ನು ರದ್ದುಪಡಿಸಲಾಗಿದೆ. ಪರೀಕ್ಷೆಗಳ ಕಾರ್ಯಸಾಧ್ಯತೆಯನ್ನು ನಿರ್ಧರಿಸಲು ಸಮಿತಿಯನ್ನು ರಚಿಸಲಾಗಿದೆ.
4. ತಮಿಳುನಾಡು:
ರಾಜ್ಯ ಮಂಡಳಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ತಮಿಳುನಾಡು ಸರ್ಕಾರ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಅಧಿಕಾರಿಗಳ ಪ್ರಕಾರ ಕೆಲವು ಶಿಕ್ಷಕರು ಮತ್ತು ಪೋಷಕರು ಈ ವಿಷಯದಲ್ಲಿ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿರುವುದರಿಂದ ನಿರ್ಧಾರ ಬಾಕಿ ಇದೆ. 7000 ಪ್ರೌಢ ಶಾಲೆಗಳಿಂದ ಪ್ರತಿಕ್ರಿಯೆ ಸಂಗ್ರಹಿಸಿ ಶಾಲಾ ಶಿಕ್ಷಣ ನಿರ್ದೇಶನಾಲಯಕ್ಕೆ ಕಳುಹಿಸಲಾಗಿದೆ.


Click it and Unblock the Notifications











