Semester Exams: ಕೊರೋನಾ ಹಿನ್ನೆಲೆಯಲ್ಲಿ ಯಾವೆಲ್ಲಾ ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿವೆ ?

ಯಾವೆಲ್ಲಾ ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿವೆ ?

ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಲೇ ಇದೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಹಿನ್ನೆಲೆಯುಂಟಾಗಿದೆ. ಅನೇಕ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಮತ್ತು ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಯಾವೆಲ್ಲಾ ವಿಶ್ವವಿದ್ಯಾಲಯಗಳು ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಮತ್ತು ಆಂತರಿಕ ಪರೀಕ್ಷೆಗಳನ್ನು ಮುಂದೂಡಿವೆ ಎಂಬ ಮಾಹಿತಿ ಇಲ್ಲಿದೆ.

ಕೊಚ್ಚಿನ್ ವಿಶ್ವವಿದ್ಯಾಲಯ:

ಕೊಚ್ಚಿನ್ ವಿಶ್ವವಿದ್ಯಾಲಯ:

ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಸಾಮಾನ್ಯ ಪ್ರವೇಶ ಪರೀಕ್ಷೆ (ಕುಸಾಟ್ ಕ್ಯಾಟ್) ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಏಪ್ರಿಲ್ 19 ರಿಂದ ನಡೆಯಬೇಕಿದ್ದ ಎಲ್ಲಾ ಪ್ರವೇಶ ಪರೀಕ್ಷೆಗಳನ್ನು ಮುಂದಿನ ದಿನಗಳಲ್ಲಿ ಪರಿಷ್ಕೃತ ದಿನಾಂಕಗಳಲ್ಲಿ ನಡೆಸಲಿದೆ. ಕೇರಳದಲ್ಲಿ COVID-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕುಸಾಟ್ ಅನ್ನು ಜೂನ್ 12 ಮತ್ತು 14 ರ ನಡುವೆ ನಿಗದಿಪಡಿಸಲಾಗಿದೆ.

ಜಮ್ಮು ವಿಶ್ವವಿದ್ಯಾಲಯ:

ಜಮ್ಮು ವಿಶ್ವವಿದ್ಯಾಲಯ:

ಜಮ್ಮು ವಿಶ್ವವಿದ್ಯಾಲಯವು ಏಪ್ರಿಲ್ 20ರ ವರೆಗೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ಇನ್ನೂ ಬಿಡುಗಡೆ ಮಾಡಿರುವುದಿಲ್ಲ. ಎಂಬಿಬಿಎಸ್, ಬಿಡಿಎಸ್ ಮತ್ತು ಬಿಎಎಂಎಸ್ ಸೇರಿದಂತೆ ವೈದ್ಯಕೀಯ ಕೋರ್ಸ್‌ಗಳ ಸೆಮಿಸ್ಟರ್ ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಪ್ರಕಟಿಸಲಾಗಿದೆ.

ಗುವಾಹಟಿ ವಿಶ್ವವಿದ್ಯಾಲಯ:

ಗುವಾಹಟಿ ವಿಶ್ವವಿದ್ಯಾಲಯ:

ಗುವಾಹಟಿ ವಿಶ್ವವಿದ್ಯಾಲಯ (ಜಿಯು) ಏಪ್ರಿಲ್ 27 ರಿಂದ ನಡೆಯಬೇಕಿದ್ದ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ.

ಗುವಾಹಟಿ ವಿಶ್ವವಿದ್ಯಾಲಯ ಮತ್ತು ಅದರ ಅಡಿಯಲ್ಲಿ ಬರುವ ಕಾಲೇಜುಗಳು / ಸಂಸ್ಥೆಗಳಲ್ಲಿ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂಬ ಜಿಯು ಹೇಳಿಕೆಯನ್ನು ಕೇಳಿ ಅಸ್ಸಾಂನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ವಿಶ್ವವಿದ್ಯಾಲಯವು ಈಗ ಪರ್ಯಾಯ ಪರೀಕ್ಷೆಯ ವಿಧಾನವನ್ನು ಅನುಸರಿಸುತ್ತಿದೆ. ಯಾವುದೇ ತುರ್ತು ಪರಿಸ್ಥಿತಿ ಮತ್ತು ವೇಳಾಪಟ್ಟಿ ಬದಲಾವಣೆಯ ಸಂದರ್ಭದಲ್ಲಿ ಬೋಧಕವರ್ಗದ ಸದಸ್ಯರು ತಮ್ಮ ಸಂಪರ್ಕಕ್ಕೆ ಲಭ್ಯವಿರಲು ತಿಳಿಸಲಾಗಿತ್ತು.

ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯ:

ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯ:

ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾಲಯ ಕೋಟಾ ಪದವಿಪೂರ್ವ ಪ್ರಥಮ ಹಾಗೂ ಮೂರನೇ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ಪದವಿಯ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ವಿಶ್ವವಿದ್ಯಾನಿಲಯವು ಕೋವಿಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ರಾಜ್ಯ ಸರ್ಕಾರದ ಒಪ್ಪಿಗೆ ಮತ್ತು ವಿಶ್ವವಿದ್ಯಾಲಯದ ಸಮರ್ಥ ಪ್ರಾಧಿಕಾರದ ಅನುಮೋದನೆಯ ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.

ವಿಶ್ವವಿದ್ಯಾಲಯವು ಎರಡನೇ, ನಾಲ್ಕನೇ, ಆರನೇ ಮತ್ತು ಏಳನೇ ಸೆಮಿಸ್ಟರ್‌ಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿದೆ.

ಅಣ್ಣಾ ವಿಶ್ವವಿದ್ಯಾಲಯ:

ಅಣ್ಣಾ ವಿಶ್ವವಿದ್ಯಾಲಯ:

ಅಣ್ಣಾ ವಿಶ್ವವಿದ್ಯಾಲಯವು ಮೇ 3 ರಿಂದ ನಡೆಯಬೇಕಿದ್ದ ಮರು ಪರೀಕ್ಷೆಗಳನ್ನುಮುಂದೂಡಿದೆ. ವಿಶ್ವವಿದ್ಯಾನಿಲಯವು ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಅತೀ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.

ಈ ಮೊದಲು ಸೆಮಿಸ್ಟರ್ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮೇ 3 ರಿಂದ ಆನ್‌ಲೈನ್ ಮೂಲಕ ಮರುಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು.

ಎಲ್ಲಾ ಸೆಮಿಸ್ಟರ್‌ಗಳಿಗೆ ಏಪ್ರಿಲ್ / ಮೇ 2021 ರ ಥಿಯರಿ ಎಂಡ್-ಸೆಮಿಸ್ಟರ್ ಪರೀಕ್ಷೆಗಳು ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳಿಗೆ ಮುಕ್ತ ಪುಸ್ತಕ ಪ್ರಕಾರದ ಆನ್‌ಲೈನ್ ಪ್ರಾಕ್ಟರ್ ಪರೀಕ್ಷೆಯಾಗಿದೆ ಎಂದು ಅದು ಮೊದಲೇ ಘೋಷಿಸಿತ್ತು. ಕೋವಿಡ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಈ ನಿರ್ಧಾರವನ್ನು ಒಂದು ಬಾರಿಯ ಕ್ರಮವಾಗಿ ತೆಗೆದುಕೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕಾಶ್ಮೀರ ವಿಶ್ವವಿದ್ಯಾಲಯ:

ಕಾಶ್ಮೀರ ವಿಶ್ವವಿದ್ಯಾಲಯ:

ಕೋವಿಡ್ ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಕಾಶ್ಮೀರ ವಿಶ್ವವಿದ್ಯಾಲಯವು ಸ್ನಾತಕೋತ್ತರ (ಪಿಜಿ) ಮತ್ತು ಪದವಿ (ಯುಜಿ) ತರಗತಿಯ ಅಂತಿಮ ಪರೀಕ್ಷೆಗಳನ್ನು ಮುಂದೂಡಿದೆ.

ಹೊಸ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದ್ದು, ಮುಖ್ಯ ಕ್ಯಾಂಪಸ್ ಅನ್ನು ಏಪ್ರಿಲ್ 28 ರವರೆಗೆ ಮುಚ್ಚಲಾಗಿದೆ.

ಕೇರಳದ ವಿಶ್ವವಿದ್ಯಾಲಯಗಳು:

ಕೇರಳದ ವಿಶ್ವವಿದ್ಯಾಲಯಗಳು:

ಕೇರಳ ವಿಶ್ವವಿದ್ಯಾಲಯಗಳಲ್ಲಿ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಕೇರಳ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ, ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ಕುಸಾಟ್), ಕೇರಳ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಮಲಯಾಳಂ ವಿಶ್ವವಿದ್ಯಾಲಯ ಮತ್ತು ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯಗಳು ಪರೀಕ್ಷೆಯನ್ನು ಮುಂದೂಡಿವೆ.

ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಬೇಕೆಂದು ಈ ಹಿಂದೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆದೇಶಿಸಿದ್ದರು.

ಕುವೆಂಪು ವಿಶ್ವವಿದ್ಯಾಲಯ:

ಕುವೆಂಪು ವಿಶ್ವವಿದ್ಯಾಲಯ:

ಕೋವಿಡ್ ಹಿನ್ನೆಲೆಯಲ್ಲಿ ವಿಧಿಸಲಾದ ಲಾಕ್‌ಡೌನ್‌ ನಿಂದಾಗಿ ಕುವೆಂಪು ವಿಶ್ವವಿದ್ಯಾಲಯವು ತನ್ನ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಕಾಲೇಜುಗಳ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಮುಂದಿನ ಪರೀಕ್ಷಾ ಪರಿಷ್ಕೃತ ದಿನಾಂಕಗಳನ್ನು ಲಾಕ್‌ಡೌನ್‌ ಮುಗಿದ ಬಳಿಕ ಪ್ರಕಟಿಸಲಿದೆ.

For Quick Alerts
ALLOW NOTIFICATIONS  
For Daily Alerts

English summary
Here is the list of universities that postponed semester exams due to covid19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X