ಮಂಗಲಪಾಂಡೆ ಮತ್ತು ಮೊದಲ ಸ್ವಾತಂತ್ರ್ಯ ಸಂಗ್ರಾಮ

By Kavya

ಭಾರತ ಇಂದು 73ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯಕ್ಕಾಗಿ ಅಸಂಖ್ಯಾತ ಹೋರಾಟಗಳು ನಡೆದಿವೆ, ಪ್ರತಿ ಹೋರಾಟಕ್ಕು ಒಂದೊಂದು ಘಟನೆಗಳು ಸಾಕ್ಷಿಯಾಗಿವೆ. ಆದರೆ ಸ್ವಾತಂತ್ರ್ಯಕ್ಕಾಗಿ ನಡೆದ ಮೊದಲನೇ ಹೋರಾಟ ಇಡೀ ಭಾರತವನ್ನೇ ಬ್ರಿಟೀಷರ ವಿರುದ್ಧ ತಿರುಗಿ ಬೀಳುವಂತೆ ಮಾಡಿತು. ಚದುರಿ ಹೋಗಿದ್ದ ಭಾರತೀಯರನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು. ಅನೇಕ ರಾಷ್ಟ್ರನಾಯಕರ ಜನನಕ್ಕೆ ಕಾರಣವಾಯಿತು.

ಸ್ವಾತಂತ್ರ್ಯ ಹೋರಾಟದ ಮೊದಲ ಸಂಗ್ರಾಮವೆಂದೇ ಹೇಳಲಾಗುವ 1857 ನೇ ಸಿಪಾಯಿದಂಗೆ ಬ್ರಿಟೀಷರ ವಿರುದ್ಧ ಮೊದಲ ಬಾರಿಗೆ ದೇಶಾದ್ಯಂತ ಹೋರಾಡಲು ಪ್ರೇರಣೆಯಾಯಿತು.

ಮೊದಲ ಸ್ವಾತಂತ್ರ್ಯ ಸಂಗ್ರಾಮ

 

1857ರ ಹೊತ್ತಿಗೆ ಬ್ರಿಟೀಷರು ಈಸ್ಟ್ ಇಂಡಿಯಾ ಕಂಪನಿಯ ಹೆಸರಿನಲ್ಲಿ ಭಾರತವನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿದ್ದರು. ಮೇ 10, 1857ರಲ್ಲಿ ಮೀರತ್ ನ ಕಂಟೋನ್ಮೆಂಟ್ ಭಾಗದಲ್ಲಿ ಭಾರತೀಯ ಸಿಪಾಯಿಗಳಿಗೂ ಮತ್ತು ಬ್ರಿಟಿಷ್ ಸಿಪಾಯಿಗಳಿಗೂ ವ್ಯಾಜ್ಯವಾಗಿ, ಇದೇ ಸಂಗತಿ 'ಸಿಪಾಯಿ ದಂಗೆ' ಅಥವಾ 'ಭಾರತೀಯ ದಂಗೆ'ಗೆ ನಾಂದಿಯಾಯಿತು.

ಮೊಟ್ಟ ಮೊದಲ ಹೋರಾಟಗಾರ ಮಂಗಲಪಾಂಡೆ

ಮಂಗಲ್ ಪಾಂಡೆ ಒಂದು ಭೂಮಿಹಾರ್ ಬ್ರಾಹ್ಮಣ ಕುಟುಂಬಕ್ಕೆ ಸೇರಿದವರು. ಅವರು 22ನೇ ವಯಸ್ಸಿನಲ್ಲಿ 1849 ರಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೇರಿದರು. ಪಾಂಡೆ 34ನೇ ಬಂಗಾಳ ಸ್ಥಳೀಯ ಪದಾತಿದಳದ 6 ನೇ ಕಂಪನಿ ಭಾಗವಾಗಿದ್ದರು ,ಈಸ್ಟ್ ಇಂಡಿಯಾ ಕಂಪನಿ ಯ ಬ್ರಿಟಿಷರ ಸೈನ್ಯದಲ್ಲಿ ಸಿಪಾಯಿಯಾಗಿದ್ದರು.

ಮಂಗಲ್ ಪಾಂಡೆ ಹೆಸರು ಇತಿಹಾಸದಲ್ಲಿ ಅಜರಾಮರವಾಗುವುದಕ್ಕೆ ಸಂದರ್ಭ ಸೃಷ್ಟಿಯಾಗಿದ್ದು, 1857, ಮಾರ್ಚ್ ನಲ್ಲಿ. ಆ ಸಂದರ್ಭದಲ್ಲಿ ಬ್ರಿಟೀಶ್ ಸರ್ಕಾರ ಹೊಸದಾಗಿ ಪರಿಚಯಿಸಿದ್ದ ಎನ್ಫೀಲ್ಡ್ ಪಿ-53 ರೈಫಲ್ ಗಳ ಬುಲೆಟ್ ಕಾರ್ಟ್ರಿಜ್ ಗೆ ಹಸು ಮತ್ತು ಹಂದಿಯ ಮಾಂಸವನ್ನು ಸವರಲಾಗಿತ್ತು. ಈ ಸಂದರ್ಭದಲ್ಲಿ ಕಾಟ್ರಿಜ್ ನ ಹಿಂಭಾಗವನ್ನು ಕಚ್ಚಬೇಕಿತ್ತು.

ಈ ವಿಷಯ ತಿಳಿಯುತ್ತಿದ್ದಂತೆಯೇ ಸೇನೆಯಲ್ಲಿದ್ದ ಹಿಂದು ಮತ್ತು ಮುಸ್ಲಿಂ ಸೈನಿಕರು ಉದ್ರಿಕ್ತರಾಗಿದ್ದರು. ಏಕೆಂದರೆ ಹಸು ಹಿಂದುಗಳಿಗೆ ಪೂಜನೀಯ. ಹಂದಿ ಎಂದರೆ ಮುಸ್ಲಿಮರಿಗೆ ವರ್ಜ್ಯ. ಎರಡು ಮತಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಇಂಥ ಕೆಲಸ ಸಾಧ್ಯವಿಲ್ಲ ಎಂದು ಸಿಪಾಯಿಗಳು ವಿರೋಧಿಸಿದ್ದರು.

ಬ್ರಿಟೀಶರ ಬಿಗುಮುಷ್ಟಿಯಿಂದ ಸ್ವಾತಂತ್ರ್ಯ ಪಡೆವ ಹುಮ್ಮಸ್ಸಿನಲ್ಲಿದ್ದ ಬಿಸಿರಕ್ತಕ್ಕೆ ನೆಪವೊಂದು ಬೇಕಿತ್ತು. ಇದೇ ವಿಷಯವನ್ನಿಟ್ಟುಕೊಂಡು ಮಂಗಲ್ ಪಾಂಡೆ, 1857, ಮಾರ್ಚ್ 29 ರಂದು ಬ್ರಿಟಿಶ್ ಅಧಿಕಾರಿ ಮೇಜರ್ ಹ್ಯೂಸನ್ ಮತ್ತು ಲೆಫ್ಟಿನಂಟ್ ಭಾಘ್ ಮೇಲೆ ಗುಂಡಿನ ದಾಳಿ ನಡೆಸಿ ಅವರಿಬ್ಬರನ್ನೂ ನೆಲಕ್ಕುರುಳಿಸಿದ್ದರು. ನಂತರ ಬ್ರಿಟೀಶ್ ಸೇನೆ ಮಂಗಲ್ ಪಾಂಡೆಯವರನ್ನು ಬಂಧಿಸಿತ್ತು.

 

ಈ ಸಂದರ್ಭದಲ್ಲಿ ಆತ್ಮಾರ್ಪಣೆ ಮಾಡಿಕೊಳ್ಳುವುದಕ್ಕೆ ಹೊರಟ ಪಾಂಡೆ ಪ್ರಯತ್ನವೂ ವಿಫಲವಾಗಿತ್ತು. ಗಾಯಗೊಂಡಿದ್ದ ಪಾಂಡೆಯವರನ್ನುಬ್ರಿಟೀಶ್ ಸರ್ಕಾರದ ಆದೇಶದ ಮೇರೆಗೆ ಏಪ್ರಿಲ್ 8 (1857)ರಂದು ಬ್ಯಾರಕ್ಪುರ(ಕೋಲ್ಕತ್ತ)ದಲ್ಲಿ ಗಲ್ಲಿಗೇರಿಸಲಾಯಿತು.

For Quick Alerts
ALLOW NOTIFICATIONS  
For Daily Alerts

English summary
The rebellion is known by many names, including the Sepoy Mutiny, the Indian Mutiny, the Great Rebellion, the Revolt of 1857, the Indian Insurrection, and India's First War of Independence.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more