ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ : ಮಂಗಳೂರು ವಿಶ್ವವಿದ್ಯಾಲಯವು 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಾಗಿತ್ತು. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಫಲಿತಾಂಶವನ್ನು ಪಡೆಯಬಹುದು.
ಪ್ರಸಕ್ತ ಸಾಲಿನಲ್ಲಿ ಪದವಿ ಪರೀಕ್ಷೆಗಳನ್ನು ಏಪ್ರಿಲ್ ತಿಂಗಳಿನಲ್ಲಿ ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ ಸೋಂಕಿನ ಅವಾಂತರದಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಹಾಗಾಗಿ ಪದವಿ ಪರೀಕ್ಷೆಗಳ ಫಲಿತಾಂಶವು ಇಂದು ಪ್ರಕಟಗೊಂಡಿದೆ.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸೇರಿದ 204 ಕಾಲೇಜುಗಳಲ್ಲಿ ಪದವಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ಪಡೆಯಬಹುದು ಮತ್ತು ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಮೈಸೂರು ವಿಶ್ವವಿದ್ಯಾನಿಲಯ ಫಲಿತಾಂಶ 2021 : ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://mangaloreuniversity.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪರೀಕ್ಷಾ ವಿಭಾಗದಲ್ಲಿ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್, ಸೆಕ್ಯುರಿಟಿ ಪಿನ್ ಮತ್ತು ಇತರೆ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











