ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಕರ್ತರಿಗೆ ಮೀಡಿಯಾ ಕಿಟ್

Posted By:

2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೊಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗೆ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸುವ ಯೋಜನೆಗಾಗಿ ಅರ್ಜಿಯನ್ನು ಆಹ್ವಾನಿಸಿದೆ.

ಪತ್ರಕರ್ತರಿಗೆ ಮೀಡಿಯಾ ಕಿಟ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು, ಇಲ್ಲವೇ ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

ನೊಂದಾಯಿತ ಪತ್ರಕರ್ತರ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿ ಸಲ್ಲಿಸಬಹುದು.

ಸದರಿ ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯು ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ದಿನಾಂಕ: 27-09-2017 ರ ಸಂಜೆ 5:00 ಗಂಟೆಯೊಳಗೆ ಕಚೇರಿ ವಿಳಾಸಕ್ಕೆ ತಲುಪಿಸತಕ್ಕದ್ದು.

ಲಕೋಟೆಯ ಮೇಲೆ "ನೊಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ" ಎಂದು ನಮೂದಿಸಿರಬೇಕು.

ಅರ್ಜಿ ತಲುಪಿಸಬೇಕಾದ ವಿಳಾಸ

ನಿರ್ದೇಶಕರು,
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ,
# ನಂ.17, ವಾರ್ತಾ ಸೌಧ,
ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001

ಹೆಚ್ಚಿನ ವಿವರಗಳಿಗಾಗಿ ಪತ್ರಿಕಾ ವಿಭಾಗದ ಉಪ ನಿರ್ದೇಶಕರುರನ್ನು ದೂರವಾಣಿ ಸಂಖ್ಯೆ 080-22028037/87 ಮೂಲಕ ಸಂಪರ್ಕಿಸಲು ಸೂಚಿಸಲಾಗಿದೆ

English summary
The Department of Information and Public Relations of Karnataka invites applications from schedule caste and schedule tribe journalists for media kit.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia