Karnataka Medical College Reopen: ರಾಜ್ಯದಲ್ಲಿ ಡಿ.1ರಿಂದ ವೈದ್ಯಕೀಯ ಕಾಲೇಜು ಆರಂಭ

ನಾಳೆಯಿಂದ ವೈದ್ಯಕೀಯ ಕಾಲೇಜುಗಳು ಪುನರಾರಂಭ
ರಾಜ್ಯದಲ್ಲಿ ನಾಳೆಯಿಂದ ಎಲ್ಲಾ ವೈದ್ಯಕೀಯ ಕಾಲೇಜುಗಳು ಪುನರಾರಂಭಗೊಳ್ಳಲಿವೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರ ಕಾಲೇಜುಗಳನ್ನು ತೆರೆಯಲು ಸೂಚನೆ ನೀಡಿದೆ.

ವಿದ್ಯಾರ್ಥಿಗಳಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕವು ತರಗತಿಗಳನ್ನು ನಡೆಸಲಾಗುತ್ತಿದೆ. ಕಾಲೇಜಿಗೆ ಹಾಜರಾಗುವ ಅಥವಾ ಆನ್‌ಲೈನ್ ತರಗತಿ ಪಡೆಯುವ ನಿರ್ಧಾರವನ್ನು ವಿದ್ಯಾರ್ಥಿಗಳೇ ತೆಗೆದುಕೊಳ್ಳಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಕಾಲೇಜಿಗೆ ಬರುವ ಮುನ್ನ ಕೊರೋನಾ ಚೆಕ್ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತೆಗೆದುಕೊಂಡು ಹಾಜರಾಗುವುದು ಕಡ್ಡಾಯವಾಗಿದೆ. ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬರೂ ಮಾಸ್ಟ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಸ್ವಚ್ಚತೆ ಕಾಪಾಡಿಕೊಳ್ಳಬೇಕಿರುತ್ತದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಸುತ್ತೋಲೆಯಲ್ಲಿ ಹೇಳಿದೆ.

For Quick Alerts
ALLOW NOTIFICATIONS  
For Daily Alerts

English summary
Karnataka medical colleges will reopen from december 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X