ವಿದ್ಯಾರ್ಥಿಗಳಿಗೆ ಆನ್ಲೈನ್ ಮತ್ತು ಆಫ್ಲೈನ್ ಮೂಲಕವು ತರಗತಿಗಳನ್ನು ನಡೆಸಲಾಗುತ್ತಿದೆ. ಕಾಲೇಜಿಗೆ ಹಾಜರಾಗುವ ಅಥವಾ ಆನ್ಲೈನ್ ತರಗತಿ ಪಡೆಯುವ ನಿರ್ಧಾರವನ್ನು ವಿದ್ಯಾರ್ಥಿಗಳೇ ತೆಗೆದುಕೊಳ್ಳಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಮತ್ತು ಸಿಬ್ಬಂದಿಗಳು ಕಾಲೇಜಿಗೆ ಬರುವ ಮುನ್ನ ಕೊರೋನಾ ಚೆಕ್ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತೆಗೆದುಕೊಂಡು ಹಾಜರಾಗುವುದು ಕಡ್ಡಾಯವಾಗಿದೆ. ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬರೂ ಮಾಸ್ಟ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತು ಸ್ವಚ್ಚತೆ ಕಾಪಾಡಿಕೊಳ್ಳಬೇಕಿರುತ್ತದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಸುತ್ತೋಲೆಯಲ್ಲಿ ಹೇಳಿದೆ.