ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರ ಅನುಕೂಲಕ್ಕಾಗಿ ಮೈಸೂರಿನಲ್ಲಿ ಅಕ್ಟೋಬರ್ ತಿಂಗಳಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಸಿದ್ದರಾಮಯ್ಯ, 'ಉದ್ಯೋಗ ಮೇಳದಲ್ಲಿ ಮೈಸೂರು, ಚಾಮರಾಜನಗರ ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರು ಭಾಗವಹಿಸಲಿದ್ದಾರೆ' ಎಂದರು.

ಮೈಸೂರು ಭಾಗದಲ್ಲಿ ಪದವೀಧರರ ಸಂಖ್ಯೆ ಹೆಚ್ಚುತ್ತಿದ್ದು, ಅವರಿಗೆಲ್ಲ ಸ್ಥಳೀಯ ಕೇಂದ್ರಗಳಲ್ಲೇ ಉದ್ಯೋಗ ಸಿಗುವಂತಾಗಬೇಕು. ಅಲ್ಲದೆ, ಮೈಸೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಕಾರ್ಖಾನೆಗಳು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗಿವೆ. ಅಲ್ಲಿ ಸ್ಥಳೀಯರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಸಿಗುವಂತಾಗಬೇಕು ಎಂದು ಅವರು ಹೇಳಿದರು.
ಅಕ್ಟೋಬರ್ ನಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚು ಯುವಕರು ಪಾಲ್ಗೊಳ್ಳುವಂತೆ ಮಾಡಲು ವ್ಯವಸ್ಥೆಯನ್ನು ಕೂಡ ಮಾಡಲಾಗುವುದು. ಅಲ್ಲದೆ ಮೇಳಕ್ಕೆ ಹೆಚ್ಚಿನ ಕಂಪನಿಗಳನ್ನು ಆಹ್ವಾನಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಎಲ್ಲಾ ಜಿಲ್ಲೆಗಳಲ್ಲೂ ಉದ್ಯೋಗ ಮೇಳ
ಕೇವಲ ಮೈಸೂರು ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉದ್ಯೋಗ ಮೇಳ ನಡೆಸಲು, ಕೌಶಲ್ಯ ತರಬೇತಿ ಮೇಳ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಭೆಯಲ್ಲಿ ಅವರು ತಿಳಿಸಿದರು. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲು ಪ್ರತಿ ಜಿಲ್ಲೆಗಳಲ್ಲೂ ಇನ್ನು ಮುಂದೆ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು. ಇದರಿಂದ ಯುವಕರು ಕೆಲಸದ ಹುಡುಕಾಟಕ್ಕಾಗಿ ಅಲೆಯುವುದು ತಪ್ಪುತ್ತದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇದರಿಂದ ಸಾಕಷ್ಟು ಅನುಕೂಲಗಳಾಗುತ್ತವೆ ಎಂಬುದಾಗಿ ಅವರು ಹೇಳಿದರು.
ಸಚಿವರಾದ ಸಂತೋಷ್ ಲಾಡ್, ಪ್ರಿಯಾಂಕಾ ಖರ್ಗೆ, ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಸಭೆಯಲ್ಲಿ ಪಾಲ್ಗೊಂಡಿದ್ದರು.


Click it and Unblock the Notifications











