Mid Day Meal Restarts From Oct 21 : ಮಧ್ಯಾಹ್ನದ ಬಿಸಿಯೂಟ ಯೋಜನೆ ಅ.21ರಿಂದ ಪುನರಾರಂಭ

ಅ.21 ರಿಂದ ಮಿಡ್ ಡೇ ಮೀಲ್ ಪುನರಾರಂಭ : ಬಿಸಿ ನಾಗೇಶ್

ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು ಹೀಗಾಗಿ ಬಿಸಿಯೂಟ ಯೋಜನೆಯನ್ನು ಸ್ಥಗಿತಗೊಳಸಲಾಗಿತ್ತು. ಆದರೆ ದಸರಾ ರಜೆಯ ಬಳಿಕ ಅಕ್ಟೋಬರ್ 21ರಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ೬ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲಾಗಿದ್ದು, ಅಕ್ಟೋಬರ್ 20,2021ರ ವರೆಗೆ ಶಾಲೆಗಳಿಗೆ ದಸರಾ ರಜೆಯನ್ನು ಘೋಷಿಸಲಾಗಿದೆ. ಶಾಲೆ ಆರಂಭಿಸಿದ ಬಳಿಕವೇ ಬಿಸಿಯೂಟ ಯೋಜನೆಯನ್ನು ಮತ್ತೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ಚರ್ಚೆಯಾಗುತ್ತಿದೆ. ಈ ಕುರಿತು ದಸರಾ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆಯ ಮೇರೆಗೆ ಪ್ರಾಥಮಿಕ ಶಾಲೆ ಆರಂಭಕ್ಕೆ ತಯಾರಿ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶುಲ್ಕ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬೇರೆ ರಾಜ್ಯಗಳಲ್ಲಿ ಶುಲ್ಕ ತಡೆ ಸಮಿತಿ ಇದೆ. ಹಾಗೆಯೇ ರಾಜ್ಯದಲ್ಲೂ ಸಮಿತಿ ರಚಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತದೆ ಮತ್ತು ಬೇರೆ ರಾಜ್ಯಗಳ ಶುಲ್ಕ ಮಾದರಿ ವರದಿ ನೀಡುವಂತೆ ಕೇಳಿ ವರದಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

For Quick Alerts
ALLOW NOTIFICATIONS  
For Daily Alerts

English summary
Karnrataka schools will reopen from october 21 and mid day meal yojana will starts again from october 21 said by education minister bc nagesh.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X