2022-23ನೇ ಸಾಲಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸೆಪ್ಟೆಂಬರ್ 19,2022 ರಿಂದ ಅಕ್ಟೋಬರ್ 20,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಕರೆಯ ಮೂಲಕ ಮತ್ತು ಟ್ವಿಟ್ಟರ್ ಮೂಲಕ ಮನವಿಯನ್ನು ಮಾಡಿಕೊಂಡಿರುವುದರಿಂದ ಹಾಗೂ ಇನ್ನೂ ಕೆಲವು ಕಾಲೇಜುಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿರುವುದರಿಂದ ಅರ್ಜಿಯನ್ನು ಸಲ್ಲಿಸಲು ನವೆಂಬರ್ 15,2022ರ ವರೆಗೆ ಅವಕಾಶ ನೀಡಲಾಗಿದೆ.
ಅರ್ಹತೆಗಳು :
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಯಾವುದೇ ಇಲಾಖೆಯ ಸರ್ಕಾರಿ/ಅನುದಾನಿತ ವಿದ್ಯಾರ್ಥಿನಿಲಯ ಹಾಗೂ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದೆ ಹಾಗೂ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳಿಗೆ 1,500/-ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು 15,000/-ರೂಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ ಜಮಾ ಮಾಡಲಾಗುತ್ತದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಸೇವಾಸಿಂಧು ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪ್ರಥಮ ಬಾರಿಗೆ ಸೌಲಭ್ಯವನ್ನು ಪಡೆಯಲು, ಈ ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಒಂದೇ ಕುಟುಂಬದ ಇಬ್ಬರು ಗಂಡು ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರು, ಆದರೆ ಈ ನಿರ್ಬಂಧ ಹೆಣ್ಣು ಮಕ್ಕಳಿಗೆ ಅನ್ವಯಿಸುವುದಿಲ್ಲ.
ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sevasindhu.karnataka.gov.in/sevasindhu/Kannada ಗೆ ಬೇಟಿ ನೀಡಿ ಅರ್ಜಿಯನ್ನು ಹಾಕಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://dom.karnataka.gov.in/ ಗೆ ಭೇಟಿ ನೀಡಬಹುದು.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











