ವೈದ್ಯಕೀಯ ಸೀಟು: ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೀಟು ನೀಡಲು ನಿರ್ಧಾರ

ರಾಜ್ಯದ ವಿದ್ಯಾರ್ಥಿಗಳಿಂದ ವೈದ್ಯಕೀಯ ಸೀಟುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಇವರ ಮೀಸಲು ಸೀಟು ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ.

ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಕನ್ನಡಿಗರಿಗೆ ವೈದ್ಯಕೀಯ ಸೀಟುಗಳಲ್ಲಿ ಹೆಚ್ಚು ಸೀಟುಗಳನ್ನು ಮೀಸಲಿರಿಸಬೇಕೆಂಬ ಬೇಡಿಕೆಗೆ ಕೊಂಚ ಸಮಾಧನ ಸಿಕ್ಕಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಇದ್ದ ಮೀಸಲು ಸೀಟು ಪ್ರಮಾಣವನ್ನು ಶೇ.30 ರಿಂದ ಶೇ.50 ಕ್ಕೆ ಹೆಚ್ಚಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಯುವ ವೈದ್ಯರ ಸಂಘದ ಮೂಲಕ ಪ್ರತಿಭಟನೆ ಮಾಡಲಾಗಿತ್ತು. ಇದನ್ನು ಮನಗಂಡ ಸರ್ಕಾರ ಇದೀಗ ಸೀಟು ಹೆಚ್ಚಳಕ್ಕೆ ಅವಕಾಶ ಕಲ್ಪಿಸಿದೆ.

'ರಾಜ್ಯದ ವಿದ್ಯಾರ್ಥಿಗಳಿಂದ ವೈದ್ಯಕೀಯ ಸೀಟುಗಳಿಗೆ ಹೆಚ್ಚಿನ ಬೇಡಿಕೆ ಇದೆ. ಹೀಗಾಗಿ ಇವರ ಮೀಸಲು ಸೀಟು ಪ್ರಮಾಣವನ್ನು ಹೆಚ್ಚಿಸಲಾಗಿದೆ. ಈ ಸಂಬಂಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ತಿಳಿಸಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳಿಗೆ ಹೆಚ್ಚಿನ ವೈದ್ಯಕೀಯ ಸೀಟು

ಒಪ್ಪಂದದ ಪ್ರಕಾರ ಖಾಸಗಿ ಕಾಲೇಜುಗಳು ಶೇ 40ರಷ್ಟು ಸೀಟುಗಳನ್ನು ಸರ್ಕಾರಕ್ಕೆ ಬಿಟ್ಟುಕೊಟ್ಟಿವೆ. ಶೇ 20ರಷ್ಟು ಸೀಟು ಅನಿವಾಸಿ ಭಾರತೀಯರಿಗೆ ಮೀಸಲಿಡಲಾಗಿದೆ. ಆಡಳಿತ ಮಂಡಳಿಯ ಶೇ 40ರಷ್ಟು ಸೀಟುಗಳ ಪೈಕಿ ಅರ್ಧದಷ್ಟು ಸೀಟುಗಳನ್ನು ಕರ್ನಾಟಕದವರಿಗೆ ಮಾತ್ರ ನೀಡಲಾಗುತ್ತದೆ.

ಹೊರ ರಾಜ್ಯದವರ ಪೈಪೋಟಿ

ಭಾರತದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅತಿ ಕಡಿಮೆಗೆ ವೈದ್ಯಕೀಯ ಶಿಕ್ಷಣ ಸಿಗುತ್ತಿರುವುದರಿಂದ ಇಲ್ಲಿನ ಕಾಲೇಜುಗಳಿಗೆ ಭಾರಿ ಪ್ರಮಾಣದ ಬೇಡಿಕೆ ಹೆಚ್ಚಾಗಿದೆ, ಅಲ್ಲದೆ ನೀಟ್ ಏಕರೂಪ ಕೌನ್ಸಲಿಂಗ್ ನಿಂದಾಗಿ ಸೀಟುಗಳನ್ನು ಪಡೆಯುವುದು ಕೂಡ ಸುಲಭವಾಗಿದೆ. ಹೀಗಾಗಿ ಇಲ್ಲಿನ ಸೀಟುಗಳಿಗೆ ಹೊರ ರಾಜ್ಯದ ಅಭ್ಯರ್ಥಿಗಳು ಹೆಚ್ಚಾಗಿ ಆಗಮಿಸುತ್ತಿದ್ದಾರೆ.

ತಮಿಳುನಾಡು, ಆಂಧ್ರಪ್ರದೇಶ, ಉತ್ತರ ಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮುಂತಾದ ರಾಜ್ಯಗಳಲ್ಲಿ ತಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಮಾತ್ರ ಎಂಬಿಬಿಎಸ್, ಬಿಡಿಎಸ್ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಮೊದಲ ಆದ್ಯತೆ ನೀಡಲಾಗುತ್ತದೆ.

For Quick Alerts
ALLOW NOTIFICATIONS  
For Daily Alerts

English summary
Karnataka medical seat allotment, private sector medical colleges quota has increased to 50 per cent from 30 per cent.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X