ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟನಿಗಮ ಮೈಸೂರು ಇಲ್ಲಿ ಖಾಲಿ ಇರುವ ವಿವಿಧ 173 ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ನವೆಂಬರ್ 2 ರಿಂದ 5,2019ರ ವರೆಗೆ ಪರೀಕ್ಷೆಗಳು ನಡೆಲಿವೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಪಡೆಯತಕ್ಕದ್ದು.
ಮೈಮುಲ್ 2019ರ ವಿವಿಧ ಹುದ್ದೆಗಳ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮದ ಅಧಿಕೃತ ವೆಬ್ಸೈಟ್ http://www.mymul.coop/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್ನಲ್ಲಿ ಲಭ್ಯವಿರುವ recruitment 2019 ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "mymul direct recruitment (online)-2019 (download admission ticket)" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅಪ್ಲಿಕೇಶನ್ ಐಡಿ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 6: ಪ್ರವೇಶ ಪತ್ರವನ್ನು ಸೇವ್ ಮಾಡಿ ನಂತರ ಡೌನ್ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶವನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ ಹಾಗೂ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ. ಪರೀಕ್ಷೆಯ ಬಗೆಗೆ ಇನ್ನಷ್ಟು ತಿಳಿಯಲು ಅಧಿಕೃತ ವೆಬ್ಸೈಟ್ ಅನ್ನು ಚೆಕ್ ಮಾಡಿ.
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ