ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ (ಗ್ರೇಡ್ -ಎ) ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.
ನಬಾರ್ಡ್ ನೇಮಕಾತಿಯ ಗ್ರೇಡ್ -ಎ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಿದ್ದು, ಪ್ರಿಲಿಮಿನರಿ ಪರೀಕ್ಷೆಯನ್ನು ಇದೇ ಫೆಬ್ರವರಿ 25,2020 ರಂದು ನಡೆಸಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಅನುಸರಿಸಿ.
ನಬಾರ್ಡ್ ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್)ನ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ ಇರುವ "Assistant manager preliminary examination 2020-Call letter/handouts download" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Download Call Letter " ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ನೇರವಾಗಿ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ