ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ 'ಎ' ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಪ್ರವೇಶಪತ್ರ ವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ನಬಾರ್ಡ್ ನೇಮಕಾತಿಯ ಗ್ರೇಡ್ ಎ ಹುದ್ದೆಗಳ ಪ್ರಮುಖ ಪರೀಕ್ಷೆಯು ಇದೇ ಸೆಪ್ಟಂಬರ್ 24,2020ರಂದು ನಡೆಯಲಿದೆ. ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.
ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್ https://www.nabard.org/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ "Recruitment Of Assistant Manager In Grade A Online Phase II (Main) Exam Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.


Click it and Unblock the Notifications











