NABARD Prelims Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

By Kavya L

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ 'ಎ' ಹುದ್ದೆಗಳ ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶಪತ್ರ ವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ 170 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಜುಲೈ 18,2022 ರಿಂದ ಆಗಸ್ಟ್ 7,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ನಬಾರ್ಡ್ ಗ್ರೇಡ್ ಎ ಪ್ರಿಲಿಮಿನರಿ ಪ್ರವೇಶ ಪತ್ರ ಪ್ರಕಟ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಲ್ಲಿಸಲು ಅರ್ಹರಾಗಿದ್ದರು.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿತ್ತು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನೇಮಕಾತಿಯ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು. ಪ್ರಿಲಿಮಿನರಿ ಪರೀಕ್ಷೆಯನ್ನು ಸೆಪ್ಟೆಂಬರ್ 7,2022ರಂದು ನಿಗದಿಪಡಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ನಬಾರ್ಡ್ ಗ್ರೇಡ್ ಎ ಪ್ರಿಲಿಮಿನರಿ ಪ್ರವೇಶ ಪತ್ರ ಪ್ರಕಟ

ನಬಾರ್ಡ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಅಭ್ಯರ್ಥಿಗಳು ನಬಾರ್ಡ್ ನ ಅಧಿಕೃತ ವೆಬ್‌ಸೈಟ್‌ https://www.nabard.org/ ಗೆ ಹೋಗಿ

ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ 'WHAT'S NEW' ನ ಕೆಳಗೆ "Recruitment Of Assistant Manager In Grade A Online Phase I (Preliminary) Exam Call Letter" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ

ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

https://ibpsonline.ibps.in/nabaramjun22/cloea_aug22/login.php?appid=01d085ce4bfe1e9f626481aa1099d36f

For Quick Alerts
ALLOW NOTIFICATIONS  
For Daily Alerts

English summary
NABARD released prelims 2022 admitcard for grade A assistant manager posts. Here is how to download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X